ರಾಜ್ಯ

ಬಿಜೆಪಿ ಮಾಜಿ ಶಾಸಕ ಸಿ. ಗುರುಸ್ವಾಮಿ ನಿಧನ

ಚಾಮರಾಜನಗರ prajakiran.com : ಚಾಮರಾಜನಗರದ ಮೊದಲ ಬಿಜೆಪಿ ಶಾಸಕರಾಗಿದ್ದ ಸಿ.ಗುರುಸ್ವಾಮಿ ಬುಧವಾರ ಬೆಳಗ್ಗೆ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಅವರಿಗೆ ಆ. 5ರಂದು ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಅವರು ಕೆಲವು ದಿನಗಳಿಂದ ಕೊರೊನಾ ಪಾಸಿಟಿವ್ ಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಬುಧವಾರ ಬೆಳಗ್ಗೆ ಹೃದಯಾಘಾತದಿಂದ ವಿಧಿವಶರಾದರು.  

ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ವಾಟಾಳ್ ನಾಗರಾಜ್ ಅವರನ್ನು 1999ರಲ್ಲಿಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದರು.

ವೃತ್ತಿಯಿಂದ ವಕೀಲರಾಗಿದ್ದಅವರು ಜನತಾ ಪಕ್ಷ, ಜನತಾದಳದಿಂದ ರಾಜಕೀಯ ಆರಂಭಿಸಿದ್ದರು. ಕೇಂದ್ರದ ಮಾಜಿ ಸಚಿವ ರಾಜಶೇಖರ ಮೂರ್ತಿಯವರ ಶಿಷ್ಯರಾಗಿದ್ದ ಇವರು ಅವರೊಂದಿಗೆ ಬಿಜೆಪಿ ಸೇರಿದ್ದರು.

ಆನಂತರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಮತ್ತೆ ಕಾಂಗ್ರೆಸ್ ತೊರೆದು ಬಿಜೆಪಿ ಮರು ಸೇರ್ಪಡೆಯಾಗಿದ್ದರು.

 ಇವರ ಅಂತ್ಯಕ್ರಿಯೆ ತಾಲ್ಲೂಕಿನ ಯಾನಗಳ್ಳಿಯ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *