ಅಂತಾರಾಷ್ಟ್ರೀಯ

ಚಂದ್ರಯಾನ-3 ಯಶಸ್ವಿ ಉಡಾವಣೆ

ನವದಹಲಿ ಪ್ರಜಾಕಿರಣ.ಕಾಮ್ : ಭಾರತದ ಹೆಮ್ಮೆಯ ಪ್ರತೀಕವಾದ ಚಂದ್ರಯಾನ-3 ಇಂದು ಶುಕ್ರವಾರ ಅಪರಾಹ್ನ 2.35 ಗಂಟೆಗೆ ಆಂಧ್ರದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3ರ ಚಾಲನೆ ಯಶಸ್ವಿ ಆಯಿತು.

ದೇಶದ ಜನರ ನಿರೀಕ್ಷೆಯಂತೆ ಈ ಬಾರಿ ಇಸ್ರೋ ಗೆದ್ದಿದೆ. ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ.

ಆ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಮುಗಿಲೆತ್ತರಕ್ಕೆ ಏರಿದೆ.

ನಮ್ಮ ಹೆಮ್ಮೆಯ ಇಸ್ರೋ ಇನ್ನೊಂದು ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದೆ. ಸಮಸ್ತ ಭಾರತೀಯರ ಬಹು ನಿರೀಕ್ಷಿತ ಬಾಹ್ಯಾಕಾಶ ಯೋಜನೆ ಚಂದ್ರಯಾನ-3 ಉಡ್ಡಯನದ ಕ್ಷಣವನ್ನು ಜನ ಕಾತರದಿಂದ ನೋಡಿ ಕಣ್ಣು ತುಂಬಿಸಿಕೊಂಡರು.
#Chandrayaan3

ಈ ಅಭೂತಪೂರ್ವ ಯಶಸ್ಸಿಗೆ ಕಾರಣರಾದ ಇಸ್ರೋ ದ ಎಲ್ಲಾ ಹೆಮ್ಮೆಯ ವಿಜ್ಞಾನಿಗಳಿಗೆ 
ಚಂದ್ರಯಾನ -3 ಯೋಜನೆಗಾಗಿ ಹಗಲಿರುಳು ಶ್ರಮಿಸಿರುವ ಎಲ್ಲಾ  ತಾಂತ್ರಿಕ ನಿಪುಣರು ಸೇರಿ ಪ್ರತಿಯೊಬ್ಬರಿಗೂ  ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *