ರಾಜ್ಯ

ಧಾರವಾಡ ಕವಿವಿ ಹಿಂಭಾಗದಲ್ಲಿ ಕಾಣಿಸಿಕೊಂಡ ಚಿರತೆ….!?

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಹಿಂಭಾಗದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಪರಿಣಾಮ ಸ್ಥಳೀಯ ಬಡಾವಣೆ ನಿವಾಸಿಗಳು ಕೆಲಕಾಲ ಆತಂಕಗೊಂಡಿದ್ದರು.

ಶಾಂಭವಿನಗರದ ಜನ ಚಿರತೆಯನ್ನು ನೋಡಿರುವುದಾಗಿ ಹೇಳಿದ್ದು, ಇಂದು ಬೆಳಿಗ್ಗೆ ಚಿರತೆ ಕರ್ನಾಟಕ ವಿಶ್ವವಿದ್ಯಾಲಯದ ಬಳಿ ಓಡಾಡಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಕಳೆದ ಒಂದು ವಾರದಿಂದ ಇದೇ ಶಾಂಭವಿನಗರದ ಪಕ್ಕದಲ್ಲಿ ಇರುವ ಮನಸೂರ ಗ್ರಾಮದ ಬಳಿ ಚಿರತೆಯೊಂದು ಕಾಣಿಸಿದೆ ಎಂದು ಜನರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.‌

ಮಾಹಿತಿ ಅರಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಲವು ಕಡೆ ಓಡಾಡಿ  ಅದರ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *