ಬಿಳಿಗಿರಿ ಶ್ರೀನಿವಾಸ
ಚಾಮರಾಜನಗರ prajakiran.com : ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಚೆಲುವಯ್ಯ ಅವರು ಸೋಮವಾರ ಕೋವಿಡ್ ಗೆ ಬಲಿಯಾಗಿದ್ದಾರೆ.
ಕಳೆದ ಒಂದು ವಾರದಿಂದ ಸೋಂಕಿಗೆ ತುತ್ತಾಗಿದ್ದ ಚೆಲವಯ್ಯ ಅವರನ್ನು ಸಂತೇಮರಹಳ್ಳಿ ಕೋವಿಡ್ ಆರೈಕೆ ಕೇಂದ್ರಕ್ಕೆ ಸೇರಿಸಲಾಗಿತ್ತು.
ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಚೆಲುವಯ್ಯ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಅವರ ನಿಧನಕ್ಕೆ ಅನೇಕ ಕ್ರೀಡಾಪಟುಗಳು, ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.