ರಾಜ್ಯ

ಚೆಕ್ ಬೌನ್ಸ್ ಪ್ರಕರಣ : ಧಾರವಾಡದ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ ಜಮನಾಳಗೆ ಮೂರು ತಿಂಗಳ ಜೈಲು ಶಿಕ್ಷೆ….!

ಧಾರವಾಡ ಪ್ರಜಾಕಿರಣ.ಕಾಮ್ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡನಾಗಿದ್ದ ಶ್ರೀಕಾಂತ@ ತಿರಕಪ್ಪ ಜಮನಾಳಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಧಾರವಾಡ ಜಿಲ್ಲೆಯ ನ್ಯಾಯಾಲಯವು ಮಹತ್ವದ ಆದೇಶ ಹೊರಡಿಸಿದೆ.

ಮಂಜುನಾಥ ಗುರುಸಂಗಪ್ಪ ದನ್ನೂರ. ಸಾ: ಧಾರವಾಡ ಎಂಬುವರು ಶ್ರೀಕಾಂತ @ ತಿರಕಪ್ಪ ತಂದೆ ಸಹದೇವಪ್ಪ ಜಮನಾಳ ವಿರುದ್ಧ 2018ರಲ್ಲಿ
ಪಿರ್ಯಾದಿ ಸಲ್ಲಿಸಿದ್ದರು.

ಪ್ರಕರಣ ಸಂಖ್ಯೆ
CC.No: 975/2018 ಇದಾಗಿದೆ.
ಈ ಹಿಂದೆ ಪಿರ್ಯಾದಿದಾರರಿಂದ ಐದು ಲಕ್ಷ ಹಣವನ್ನು ಪಡೆದುಕೊಂಡು ಮರಳಿ‌ ನೀಡದೆ ಚೆಕ್ ಕೊಟಿದ್ದರು.

ಅಲ್ಲದೆ, ಚೆಕ್ಕನ್ನು ಬ್ಯಾಂಕನಲ್ಲಿ ಹಾಕಿದಾಗ ಚೆಕ್ ಬೌನ್ಸ ಆಗಿದ್ದು ಪಿರ್ಯಾದಿದಾರರು ಆರೋಪಿತನ ಮೇಲೆ 138 N.I act ಅಡಿಯಲ್ಲಿ‌ ನ್ಯಾಯಾಲಯದಲ್ಲಿ ದೂರು‌ ದಾಖಲಿಸಿದ್ದರು.

ಪ್ರಕರಣದ ವಿಚಾರಣೆಯಾಗಿ
ಪ್ರಕರಣದಲ್ಲಿ 2019 ರಲ್ಲಿ ಪಿರ್ಯಾದಿದಾರರೊಂದಿಗೆ ಐದು ಲಕ್ಷ ಹಣ ಕೊಡುವುದಾಗಿ ನ್ಯಾಯಾಲಯದಲ್ಲಿ ರಾಜಿ ಮಾಡಿಕೊಂಡಿದ್ದ.

ಆದರೆ ಇಲ್ಲಿಯವರೆಗೆ ಹಣ ನೀಡದೆ ತಲೆ ಮರೆಸಿಕೊಂಡಿದ್ದ ಆರೋಪಿ ಶ್ರೀಕಾಂತ @ತಿರಕಪ್ಪ ಜಮನಾಳ ವಿರುದ್ಧ ನ್ಯಾಯಾಲಯವು ಆರೋಪಿತನ‌ ಪತ್ತೆಗಾಗಿ ದಸ್ತಗಿರಿ ವಾರಂಟ್ ಹೊರಡಿಸಿತ್ತು.

ಧಾರವಾಡದ ಉಪನಗರ ಪೊಲೀಸರು ಶುಕ್ರವಾರ ಆರೋಪಿಯನ್ನು ದಸ್ತಗಿರಿ ಮಾಡಿ‌ ಪ್ರಧಾನ ಸಿ.ಜೆ ಮತ್ತು‌ ಜೆ.ಎಮ್.ಎಫ್.ಸಿ‌ ನ್ಯಾಯಾಲಯದ ಮುಂದೆ‌ ಹಾಜರು ಪಡಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ‌ ಗಿರಿಶ ಆರ್, ಬಿ ಅವರು ಆರೋಪಿತನಿಗೆ ಮೂರು ತಿಂಗಳ ಸಾದಾ ಕಾರಾಗೃಹ ವಾಸ ಶಿಕ್ಷೆಯನ್ನು ವಿಧಿಸಿ ಆದೇಶಿಸಿದರು.

ಇದರಿಂದಾಗಿ ಆರೋಪಿ ಶ್ರೀಕಾಂತ @ತಿರಕಪ್ಪ ಜಮನಾಳ ಇದೀಗ ಧಾರವಾಡ ಕೇಂದ್ರ ಕಾರಾಗೃಹ ಪಾಲಾಗಿದ್ದಾನೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *