ನವದೆಹಲಿ prajakiran.com : ಭೂಗತ ಪಾತಕಿ ಛೋಟಾ ರಾಜನ್ ಗೆ ಈಗ ಕೊರೋನಾ ಸೋಂಕು ದೃಢಪಟ್ಟಿದೆ.
ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಿಹಾರ್ ಜೈಲಿನಲ್ಲಿರುವ ಛೋಟಾ ರಾಜನ್ ಗೆ ಕೊರೋನಾ ಸೋಂಕು ತಗುಲಿದೆ.
ಇಂಡೋನೇಷ್ಯಾದಿಂದ ಗಡಿಪಾರು ಮಾಡಿದ ಬಳಿಕ 70ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳ ಅಡಿಯಲ್ಲಿ ಛೋಟಾ ರಾಜನ್ ನನ್ನು ಬಂಧಿಸಿ ದೆಹಲಿಯ ತಿಹಾರ್ ಜೈಲಿನಲ್ಲಿರಿಸಲಾಗಿದೆ.
ಕೊರೋನಾ ಹಿನ್ನೆಲೆ ವಿಚಾರಣೆ ನಡೆಸಲಾಗುತ್ತಿಲ್ಲ ಎಂದು ತಿಹಾರ್ ಜೈಲಿನ ಸಹಾಯಕ ಜೈಲರ್ ಸೆಷನ್ಸ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.