ರಾಜ್ಯ

ಹು-ಧಾ ಮ ನ ಪಾ ಚುನಾವಣೆ : ಇಂದು ರಾತ್ರಿ 9 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯಗೊಳಿಸಲು

ರಾಜ್ಯ ಚುನಾವಣಾ ಆಯೋಗದ ಆದೇಶ

*ಧಾರವಾಡ prajakiran. com ಆ.30: 
ರಾಜ್ಯ ಚುನಾವಣಾ ಆಯೋಗವು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ – 2021ರ ನಿಮಿತ್ಯ ಮಹಾನಗರ ಪಾಲಿಕೆಯ ಚುನಾವಣೆಗೆ ಮತದಾನ ಆರಂಭವಾಗುವ 48 ಗಂಟೆಗಳ ಮುಂಚಿತವಾಗಿ ರಾಜಕೀಯ ಪಕ್ಷಗಳು, ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪರವಾಗಿ ಯಾರೇ ಇತರರು ತಮ್ಮ ಬಹಿರಂಗ ಪ್ರಚಾರವನ್ನು ಮುಕ್ತಾಯ ಮಾಡಬೇಕು ಎಂದು ಚುನಾವಣಾ ಆಯೋಗವು ಆದೇಶಿಸಿದೆ.

ಸಂಬಂಧಿಸಿದ ಎಲ್ಲ ರಾಜಕೀಯ ಮುಖಂಡರು, ಅಭ್ಯರ್ಥಿಗಳು, ಕಾರ್ಯಕರ್ತರು ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಚುನಾವಣಾ ಆಯೋಗವು ಇಂದು(ಆ.30) ಈ ಕುರಿತು ಆದೇಶ ಹೊರಡಿಸಿದ್ದು, ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ, ಚುನಾವಣಾ ಪ್ರಚಾರವು ಮತದಾನ ಆರಂಭವಾಗುವ 48 ಗಂಟೆಗಳ ಮುಂಚೆ ಮುಕ್ತಾಯವಾಗುತ್ತದೆ.

ಅಂದರೆ ಸೆಪ್ಟೆಂಬರ್ 1ರ ಬೆಳಿಗ್ಗೆ 7 ಗಂಟೆಯ ನಂತರ ರಾಜಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಯ ಪರವಾಗಿ ಯಾರೇ ಇತರರು ಯಾವುದೇ ವಿಧದಲ್ಲಿ ಬಹಿರಂಗ ಪ್ರಚಾರವನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

ಮತ್ತು ಜಿಲ್ಲಾಡಳಿತ ಹಾಗೂ ಪೊಲೀಸ ಇಲಾಖೆ ಈ ಆದೇಶಗಳ ಪಾಲನೆಯ ಬಗ್ಗೆ ಸೂಕ್ತ ನಿಗಾವಹಿಸಿ, ಕಣ್ಗಾವಲು ಇಡುವಂತೆ ಹಾಗೂ ನಿಯಮಗಳ ಉಲ್ಲಂಘನೆಯಾದ ಪಕ್ಷದಲ್ಲಿ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗವು ಸೂಚಿಸಿದೆ ಎಂದು ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್ 1 ರಂದು ಬೆಳಿಗ್ಗೆ 7 ಗಂಟೆಯ ನಂತರ ಬೆಂಬಲಿಗರು, ರಾಜಕೀಯ ಪಕ್ಷದ ಪದಾಧಿಕಾರಿಗಳು, ಮುಖಂಡರು, ಪಕ್ಷದ ಕಾರ್ಯಕರ್ತರು ಪ್ರಚಾರ ಕಾರ್ಯ ನಿರ್ವಹಿಸುವವರು ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಗಳ ವ್ಯಾಪ್ತಿಯಲ್ಲಿ ತಮ್ಮ ವಾಸ್ತವ್ಯ ಮುಂದುವರಿಸಿದ್ದಲ್ಲಿ ಚುನಾವಣೆಯ ಮುಕ್ತ ಮತ್ತು ನಿಷ್ಪಕ್ಷಪಾತ ವಾತಾವರಣಕ್ಕೆ ಧಕ್ಕೆ ಉಂಟಾಗುವ ಸಂಭವವಿರುವುದರಿಂದ ನಗರ ಸ್ಥಳೀಯ ಸಂಸ್ಥೆಗಳ ವಾರ್ಡಿನ ಮತದಾರರಲ್ಲದೇ ಇರುವ ವ್ಯಕ್ತಿಗಳು ಆ ಸ್ಥಳದಿಂದ ಹೊರಗೆ ಹೋಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲಾಗುವುದು ಮತ್ತು ಹೋರಗೆ ಹೋಗಿರದಿದ್ದರೆ ಅಂತವರನ್ನು ಹೊರಗೆ ಕಳಿಸುವ ಬಗ್ಗೆ ಅಯೋಗದ ಸೂಚನೆಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಮಹಾನಗರಪಾಲಿಕೆಗಳ ವಾರ್ಡಿನ ವ್ಯಾಪ್ತಿಯಲ್ಲಿರುವ ಕಲ್ಯಾಣ ಮಂಟಪ, ಸಮುದಾಯಭವನ ಹಾಗೂ ಇತರೆ ಸ್ಥಳಗಳಲ್ಲಿ ನಗರ ಸ್ಥಳೀಯ ಸಂಸ್ಥೆ ವಾರ್ಡಿನ ವ್ಯಾಪ್ತಿಗೆ ಒಳಪಡದ ವ್ಯಕ್ತಿಗಳು ಇದ್ದಾರೆಯೇ ಎಂಬ ಬಗ್ಗೆ ತಪಾಸಣೆ ಮಾಡುಬೇಕು.

ಮಹಾನಗರ ಪಾಲಿಕೆಗಳ ವಾರ್ಡಿನ ವ್ಯಾಪ್ತಿಯಲ್ಲಿರುವ ಪ್ರವಾಸಿಗರ ವಸತಿಗೃಹಗಳಲ್ಲಿ ಮತ್ತು ಪ್ರವಾಸ ಮಂದಿರಗಳಲ್ಲಿ ಸ್ಥಳಕ್ಕೆ ಸಂಬಂಧಿಸಿದ ವ್ಯಕ್ತಿಗಳಿದ್ದಾರೆ ಎಂಬ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

ವಾರ್ಡಿನ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ವಾಹನಗಳು ಹಾಗೂ ಜನರು ಸಂಚಾರ ನಡೆಸುತ್ತಿದ್ದರೆ ಅವರ ಮೇಲೆ ನಿಗಾವಹಿಸಬೇಕು.

ಯಾವುದೇ ರೀತಿ, ನೀತಿ ಸಂಹಿತೆಯ ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು ಎಂದು ಅವರು ಸಂಭಂದಿಸಿದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ಇಂದು ನೀಡಿರುವ ಆದೇಶವನ್ನು ಪೊಲೀಸ್ ಹಾಗೂ ಸಂಬಂಧಿಸಿದ ಅಧಿಕಾರಿಗಳ ಮೂಲಕ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಹೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *