ರಾಜ್ಯ

ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರ ಪ್ರತಿಭಟನೆಗಳಿಯಬೇಡಿ ಎಂದ ಯಡಿಯೂರಪ್ಪ

ಬೆಂಗಳೂರು prajakiran.com : ರಾಜ್ಯದಲ್ಲಿ ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಸುದ್ದಿ ಹರಿದಾಡಿದ ಬೆನ್ನಲ್ಲೇ ನಾಡಿನ ವಿವಿಧ ಭಾಗಗಳ ಮಠಾಧೀಶರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ‌.

ಅಲ್ಲದೆ, ಇದರ ಪರಿಣಾಮ ಎದುರಿಸಬೇಕಾದಿತು ಎಂಬ ಸಂದೇಶ ಕಳಿಸುವ ಮೂಲಕ ಬಿಜೆಪಿ ಹೈಕಮಾಂಡ್ ನ್ನು ಎಚ್ಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ‌
ಅದರ ಸಾರಾಂಶ ಹೀಗಿದೆ ನೋಡಿ.

ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ.

ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.
ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ.

ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಮನವಿ ಮಾಡಿದ್ದಾರೆ.

ಅಲ್ಲದೆ, ಈಗಾಗಲೇ ಹೈ ಕಮಾಂಡ್ ನಿರ್ಧಾರಕ್ಕೆ ಬದ್ದ ಎಂದು ಹೇಳಿರುವುದು ಇಲ್ಲಿ ಸ್ಮರಿಸಬಹುದು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *