ಅಂತಾರಾಷ್ಟ್ರೀಯ

ಬೆಳಗಾವಿಯ ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮನೆ ಕುಸಿತ ದುರಂತ : ಮುಖ್ಯಮಂತ್ರಿ ಸಂತಾಪ

ಬೆಳಗಾವಿ prajakiran.com :  ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮನೆ ಕುಸಿತದಿಂದ ಸಂಭವಿಸಿರುವ ಅನಾಹುತದಿಂದ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವುದಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸಿಎಂ ಸಲಹೆ ನೀಡಿದ್ದಾರೆ.

ಕೂಡಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

 ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿಯಲ್ಲಿ ಮನೆ ಬಿದ್ದು 7 ಜನ ಸಾವನ್ನಪ್ಪಿರುವ ಪ್ರಕರಣದ ಈ ದುರಂತದಲ್ಲಿ ಬದುಕುಳಿದ ವ್ಯಕ್ತಿ ಭೀಮಪ್ಪನ ಜೊತೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ನಿನ್ನ ಜೊತೆಗಿರುತ್ತದೆ ಎಂದು ಹೇಳಿದರು.

ಮೃತಪಟ್ಟಿರುವವರ ಅಂತ್ಯಸಂಸ್ಕಾರಕ್ಕೆ ಎಲ್ಲ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ‌.

ತಕ್ಷಣವೇ ಪರಿಹಾರದ ಹಣವನ್ನು ತಲುಪಿಸಲಾಗುವುದು. ಯಾವುದೇ ಕಾರಣಕ್ಕೂ ದೃತಿಗೆಡಬೇಡ ಎಂದು ಭೀಮಪ್ಪನಿಗೆ ಅಭಯ ನೀಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *