ರಾಜ್ಯ

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಗೋಕಾಕ ಸಮನ್ಸಗೆ ಹೈಕೋರ್ಟ್ ತಡೆ

ಧಾರವಾಡ prajakiran.com : ಉಪಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗೋಕಾಕ ಜೆಎಂಎಫ್‌ಸಿ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಮತ್ತು ವಿಚಾರಣಾ ಪ್ರಕ್ರಿಯೆಗೆ ಇಲ್ಲಿನ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ, ವಿಚಾರಣೆ ಮುಂದೂಡಿದೆ.

ಕಳೆದ ನವೆಂಬರ್‌ನಲ್ಲಿ ನಡೆದ ಗೋಕಾಕ ವಿಧಾನಸಭಾ ಉಪಚುನಾವಣೆ ಸಂದರ್ಭದಲ್ಲಿ ಒಂದು ಸಮುದಾಯವನ್ನು ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ್ದರು.

ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಯಾಗಿದೆ ಎಂದು ಯಡಿಯೂರಪ್ಪ ಅವರ ವಿರುದ್ಧ ೨೦೧೯ರ ನವೆಂಬರ್ ೨೬ ರಂದು ದೂರು ದಾಖಲಾಗಿತ್ತು.

ದೂರು ಸ್ವೀಕರಿಸಿದ್ದ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯ, ವಿಚಾರಣೆ ನಡೆಸುವಂತೆ ಆದೇಶಿಸಿ, ಸಮನ್ಸ್ ಜಾರಿಗೊಳಿಸಿತ್ತು.

ದೂರಿನ ಅನ್ವಯ ದಾಖಲಾಗಿದ್ದ ಎಫ್‌ಐಆರ್ ಮತ್ತು ವಿಚಾರಣಾ ಪ್ರಕ್ರಿಯೆಯನ್ನು ಅನೂರ್ಜಿತಗೊಳಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಯಡಿಯೂರಪ್ಪ ಅವರು ಚುನಾವಣಾ ಕ್ರಿಮಿನಲ್ ಅರ್ಜಿ ಸಲ್ಲಿಸಿದರು.

ಅದರಂತೆ ವಿಚಾರಣೆ ನಡೆಸಿದ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ವಾದಪ್ರತಿವಾದ ಆಲಿಸಿದ ಪ್ರಕರಣದ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ಕೆಳ ನ್ಯಾಯಾಲಯದ ವಿಚಾರಣೆ ಮತ್ತು ಸಮನ್ಸ್ ಗೆ ಮಧ್ಯಂತ ತಡೆ ನೀಡಿ, ತೀರ್ಪು ಕಾಯ್ದಿರಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *