ಬೆಂಗಳೂರು prajakiran.com : ಬೌರಿಂಗ್ ಆಸ್ಪತ್ರೆಯಲ್ಲಿಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಮೂಲಕ ಸಿಎಂ ಚಾಲನೆ ನೀಡಿದರು.
ಲಸಿಕೆ ನೀಡುವುದಕ್ಕೆ ಜಾಲನೆ ನೀಡಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೋನಾ ಲಸಿಕೆಗೆ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು ದರ ತೆಗೆದುಕೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕೇಂದ್ರದಿಂದ 3 ಲಕ್ಷ ಲಸಿಕೆ ಬಂದಿದ್ದು, ನಮ್ಮ ಬಳಿ 1 ಲಕ್ಷ ಲಸಿಕೆ ಸಂಗ್ರಹವಿದೆ. ಒಟ್ಟು 4 ಲಕ್ಷ ಡೋಸ್ ಲಸಿಕೆಯಿದೆ. 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡುವುದು ಕೋವಿಡ್ ವಿರುದ್ಧದ ಸಮರದಲ್ಲಿ ಮಹತ್ವದ ದಿನವಾಗಿದೆ.
ಒಂದೆರಡು ದಿನಗಳಲ್ಲಿ ಇನ್ನಷ್ಟು ಲಸಿಕೆಗಳು ಪೂರೈಕೆಯಾಗಲಿದ್ದು, ಅಭಿಯಾನ ದೊಡ್ಡ ಪ್ರಮಾಣದಲ್ಲಿ ನಿರಂತರ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆಗೆ ದರ ನಿಗದಿ ಮಾಡಲಾಗಿದೆ. ಕೋವಿಡ್ಗೆ ಸಂಬಂಧಿಸಿದ ಔಷಧವನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಜನರು ಸರ್ಕಾರದ ಮಾರ್ಗ ಸೂಚಿ ಪಾಲಿಸಬೇಕು. ಜನರು ಸಹಕಾರ ನೀಡಿದರೆ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ಎಂದಿದ್ದಾರೆ.