ರಾಜ್ಯ

ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು prajakiran. com, ಜುಲೈ 29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು.

ಶಾಸಕ ತನ್ವೀರ್ ಸೇಠ್ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ ಪ್ರಕರಣದಿಂದ ಅವರನ್ನು ಮುಕ್ತಗೊಳಿಸಲಾಗಿತ್ತು.

ಅವರು ಈಗ ಪುನ: ಸಮಾಜಘಾತುಕ ಕೃತ್ಯಗಳನ್ನು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕೇವಲ ಹೇಳಿಕೆಗಳನ್ನು ನೀಡುತ್ತಾರೆ ಎಂದರು.

ಸರ್ಕಾರ ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಜನರ ಮುಂದಿವೆ.

ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬುದು ಅತ್ಯಂತ ಹಾಸ್ಯಾಸ್ಪದವಾದ ಹೇಳಿಕೆ.

ಇದು ಕಾಂಗ್ರೆಸ್ಸಿನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜಿನಾಮೆ ಕೊಡುವ ಅಗತ್ಯವಿಲ್ಲ.

ಇಂತಹ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಿಲ್ಲ. ಗಟ್ಟಿಯಾಗಿ ನಿಂತು ಕಠಿಣ ನಿಲುವುಗಳನ್ನು ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *