ಕ್ರೀಡೆ

ರಾಷ್ಟ್ರಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕು.ಪವಿತ್ರಾ ಕುರ್ತಕೋಟಿಗೆ ಮುಖ್ಯಮಂತ್ರಿಗಳಿಂದ ಸೈಕಲ್ ಪ್ರದಾನ

ಬೆಂಗಳೂರು prajakiran.com ಸೆ 24: ಗದಗ ಜಿಲ್ಲೆಯ ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕುಮಾರಿ ಪವಿತ್ರಾ ಕುರ್ತಕೋಟಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಕಲ್ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟುವಾಗಿರುವ ಪವಿತ್ರಾ ಅವರಿಗೆ ಸೈಕಲ್ ಅಗತ್ಯವಿರುವ ಬಗ್ಗೆ ಟಿ.ವಿ.9 ಸಂದರ್ಶನದ ಸಂದರ್ಭದಲ್ಲಿ ತಿಳಿದುಬಂದ ಹಿನ್ನೆಲೆಯಲ್ಲಿ ಇಲಾಖೆಗೆ ವಿಷಯ ಮುಟ್ಟಿಸಲಾಗಿತ್ತು.

ಕೇವಲ 8 ದಿನಗಳಲ್ಲಿ ಕೆನಡಾದಿಂದ ಸೈಕಲ್ ತರಿಸಿಕೊಡುವ ಕೆಲಸವನ್ನು ಯೋಜನಾ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಮಾಡಿದ್ದಾರೆ.

ಸರ್ಕಾರದ ಅನುದಾನ ಪಡೆಯದೆ ದೇಣಿಗೆ ಪಡೆದು ಈ ಕಾರ್ಯವನ್ನು ಮಾಡಿರುವುದಕ್ಕಾಗಿ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಪವಿತ್ರಾ ಕುರ್ತಕೋಟಿ ಪಟಿಯಾಲದಲ್ಲಿ ಏರ್ಪಡಿಸಿರುವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು, ಚಿನ್ನದ ಪದಕ ಗೆಲ್ಲುವಂತಾಗಲಿ ಎಂದು ಹಾರೈಸಿದರು.

ಅಂತರರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಟ್ರಾಕ್ ನ್ನು ವಿಜಯಪುರದ ಮೇಲೊಡ್ರೋಮ್ ಶೀರ್ಘ್ರದಲ್ಲಿಯೇ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.

ಈ ಸೈಕಲ್ ನ್ನು ಕೆಲಡಾ ದೇಶದಿಂದ ತರಿಸಲಾಗಿದೆ. ಇದರ ವೆಚ್ಚ ೫ ಲಕ್ಷ ರೂಪಾಯಿ. ಈ ವೆಚ್ಚವನ್ನು ಎಂಬೆಸ್ಸೆ, ಬ್ಲಾಸಂ ಆಸ್ಪತ್ರೆ ಹಾಗೂ ಮಧುಸೂಧನ ಎಂಬುವರು ಸಿಎಸ್ ಆರ್ ನಿಧಿಯಿಂದ ಭರಿಸಿದ್ದಾರೆ.

ಸಚಿವರಾದ ನಾರಾಯಣಗೌಡ, ಸಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ , ಬಿ.ಶ್ರೀರಾಮುಲು, ಬಿ.ಡಿ.ಎ.ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಯೋಜನಾ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *