ರಾಜ್ಯ

ಲಾಕ್ಡೌನ್ ವಿಸ್ತರಣೆ ವಿಚಾರ : ಸಚಿವರ ಸಭೆಯಲ್ಲಿ ಯಡಿಯೂರಪ್ಪ ನಿರ್ಧಾರ

ಬೆಂಗಳೂರು prajakiran. com : ಸದ್ಯಕ್ಕೆ ಜೂನ್ 7 ರ ವರೆಗೆ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂತ್ರಿಮಂಡಲದ ಸದಸ್ಯರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ,ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೇಂದ್ರ ಗೃಹ ಇಲಾಖೆಯ ಹೊಸ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದರು.

ಸದ್ಯಕ್ಕೆ ಜೂನ್ 7ರವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಾದ ಲಾಕ್ಡೌನ್ ಜಾರಿಯಲ್ಲಿ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಆದರೆ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಜೂನ್ 30ರವರೆಗೆ ಬಿಗಿ ಕ್ರಮಗಳು ಇರಬೇಕು ಅಂತ ಹೇಳಿದೆ.

ಇದನ್ನು ಯಾವ ರೀತಿ ಜಾರಿ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳು ಸಚಿವರ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬೊಮ್ಮಾಯಿ ವಿವರಿಸಿದರು.

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಇನ್ನೂ ಕಡಿಮೆಯಾಗಿಲ್ಲ. ಅದು ಶೇಕಡ ೧೦ ಕ್ಕಿಂತ ಕಡಿಮೆ ಆಗಬೇಕಾಗಿದೆ.

ಗ್ರಾಮೀಣ ಪ್ರದೇಶದಲ್ಲಿಯೂ ಕೋವಿಡ್ ಪ್ರಮಾಣ ಮತ್ತು ಸಾವುಗಳ ಸಂಖ್ಯೆ ನಿಯಂತ್ರಣಕ್ಕೆ ಬರಬೇಕು. ಆಗ ಮಾತ್ರ ಕೋವಿಡ್ ಹತೋಟಿಗೆ ಬರಲು ಸಾಧ್ಯ.

ಆಗ ನಮ್ಮ ರಾಜ್ಯದಲ್ಲಿರುವ ಆಸ್ಪತ್ರೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಲಾಕ್ಡೌನ್ ನಷ್ಟಕ್ಕೆ ಪರಿಹಾರ ನೀಡಿ

ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾಗಿರುವ 11 ಸಾವಿರ ಕೋಟಿ ಜಿಎಸ್ಟಿ ಪರಿಹಾರವನ್ನು ನೀಡುವಂತೆ ಕೇಂದ್ರಕ್ಕೆ ಒತ್ತಾಯ ಮಾಡಲಾಗಿದೆ.

ಈ ವರ್ಷ ಮತ್ತೆ ಕೋವಿಡ್ ಬಂದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಚೇತರಿಸಿಕೊಂಡಿತ್ತು. ಆದರೆ ಈಗ ಮತ್ತೆ ಲಾಕ್ ಡೌನ್ ಜಾರಿಯಲ್ಲಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿ 2 – 3 ತಿಂಗಳು ಜಿಎಸ್ಟಿ ಸಂಗ್ರಹ ಕಡಿಮೆಯಾಗುತ್ತದೆ. ಹೀಗೆ ಲಾಕ್ಡೌನ್ ನಲ್ಲಿ ಕಡಿಮೆಯಾಗುವ ಜಿಎಸ್ಟಿ ಪರಿಹಾರವನ್ನು ತುಂಬಿಕೊಡುವಂತೆ ಎಲ್ಲ ರಾಜ್ಯಗಳು ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಒತ್ತಾಯ ಮಾಡಿದವು‌.

ಕರ್ನಾಟಕದಿಂದ ನಾನು ಕೂಡ ಇದೇ ಒತ್ತಾಯ ಮಾಡಿದ್ದೇನೆ. ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ.

ಜಿಎಸ್ಟಿ ಇಂದ ಎಷ್ಟು ಪರಿಹಾರ ಕೊಡಬೇಕು ? ಸಾಲ ಪಡೆಯಲು ಅನುಮತಿ ನೀಡಬೇಕಾ? ಇದನ್ನು ಹೊರತುಪಡಿಸಿ ಉಳಿದ ಪರಿಹಾರ ಹಣವನ್ನು ಯಾವ ರೂಪದಲ್ಲಿ ನೀಡಲು ಸಾಧ್ಯ ಎಂಬುದರ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಒಂದೆರಡು ದಿನಗಳಲ್ಲಿ ಸತ್ಯ ಹೊರ ಬರಲಿದೆ. ಪ್ರಕರಣದ ಹಿನ್ನೆಲೆಗೆ ಸ್ಪಷ್ಟ ರೂಪ ಸಿಗಲಿದೆ.

ಬಸವರಾಜ್ ಬೊಮ್ಮಾಯಿ
ಗೃಹ ಸಚಿವರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *