ಬೆಂಗಳೂರು prajakiran.com : ಕೊರೋನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.
ಈ ಹಿನ್ನೆಲೆ ಬಿಪಿಎಲ್ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದರು.
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ವಯಸ್ಕರು ಕೋವಿಡ್ ನಿಂದ ಮೃತಪಟ್ಟಿದ್ದರೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಪರಿಹಾರ ನೀಡಲಾಗುತ್ತೆ ಎಂದರು.