ಧಾರವಾಡ prajakiran.com : ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಧಾರವಾಡದ ಒಂಬತ್ತು ಜನರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ.
ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.