ರಾಜ್ಯ

ಭ್ರಷ್ಟಾಚಾರ ಪ್ರಕರಣದ ವಿರುದ್ಧ ಹೋರಾಟ ಮಾಡುತ್ತಿರುವುದು ಕಾಂಗ್ರೆಸ್ ನ ದುರಂತ

ದಾವಣಗೆರೆ prajakiran. com ಜೂನ್ 16: ಕಾನೂನುಬಾಹಿರವಾಗಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ವಿಚಾರಣೆಯ ವಿರುದ್ಧ ಕಾಂಗ್ರೆಸ್ ನವರು ಹೋರಾಟ ಮಾಡುತ್ತಿರುವುದು ಕಾಂಗ್ರೆಸ್ಸಿನ ದುರಂತ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಇದೆ ರೀತಿ ಆದರೆ ಅವರ ‘ಮನೆಗೆ ಚಲೋ ಅಭಿಯಾನ’ ಮಾಡಬೇಕಾಗುತ್ತದೆ ಎಂದರು.

ಪಠ್ಯಪುಸ್ತಕ ಪರಿಷ್ಕರಣೆ* *ಸಲಹೆಗಳಿಗೆ ಮುಕ್ತ ವಾಗಿದ್ದೇವೆ: 
ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ತಪ್ಪುಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು 

ಈಗಾಗಲೇ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸರಿಪಡಿಸಲಾಗುತ್ತಿದೆ. ಸಲಹೆಗಳಿಗೆ ನಾವು ಮುಕ್ತವಾಗಿದ್ದೇವೆ.

ಇಲಾಖೆಯ ವೆಬ್ ಸೈಟ್ ನಲ್ಲಿಯೂ ವಿವರಗಳನ್ನು ನೀಡಲಾಗಿದೆ. ಹಿಂದಿನ ಪಠ್ಯಪುಸ್ತಕಗಳ ಬಗ್ಗೆಯೂ ಆಕ್ಷೇಪವಿದೆ. ಪಠ್ಯಪುಸ್ತಕಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *