ಬೆಂಗಳೂರು prajakiran.com : ಸಿಎಂ ಗೃಹ ಕಚೇರಿ ಕೃಷ್ಣಾದ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ ಬಂದಿರುವ ಕಾರಣ, ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಮೂಲಕ ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ನಾನು ಆರೋಗ್ಯವಾಗಿದ್ದೇನೆ ಎಂದು ವಿವರಿಸಿದ್ದಾರೆ.
ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾ ಮತ್ತು ಕಾವೇರಿ ನಿವಾಸದಲ್ಲಿ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಈಗಾಲೇ ಬಿಬಿಎಂಪಿ ಸಿಬ್ಬಂದಿ ಸ್ಯಾನಿಟೈಸರ್ ಸಿಂಪಡಿಸಿದ್ದಾರೆ.
ಕೆಲ ದಿನಗಳ ಕಾಲ ಮನೆಯಿಂದಲೇ ಸಿಎಂ ಕಾರ್ಯನಿರ್ವಹಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆಗಳನ್ನು ಪಾಲಿಸುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಸಿಎಂ ಬೆಂಗಾವಲು ವಾಹನದ ಸಿಬ್ಬಂದಿಗೆ ಕರೋನಾ ವೈರಸ್ ಬಂದಿರುವುದರಿಂದಅವರು ಸಿಎಂ ಬಿಎಸ್ ವೈ ಅವರ ನೇರ ಸಂಪರ್ಕಕ್ಕೆ ಬಂದಿಲ್ಲ. ಹೀಗಾಗಿ ಆತಂಕ ಪಡುವಅಗತ್ಯವಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟಪಡಿಸಿದೆ.
ಈಗಾಗಲೇ ಬಿಬಿಎಂಪಿ ಅವರ ಕಚೇರಿಯ ಹಾಗೂ ಸುತ್ತಮುತ್ತ ಸ್ಯಾನಿಟೈಸ್ ಮಾಡಿದೆ.