ಆಧ್ಯಾತ್ಮ

ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹುಬ್ಬಳ್ಳಿ ಪ್ರಜಾಕಿರಣ. ಕಾಮ್ : ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಚುನಾವಣೆ ವರ್ಷ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಜನ ಸಂಕಲ್ಪ ಯಾತ್ರೆಯನ್ನು ತೀವ್ರಗೊಳಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ಇದರ ಜೊತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದರು.

*ಜಾಯಿನ್ ಪಿಎಫ್ಐ ವಿಚಾರ: ಪೊಲೀಸರು ಕ್ರಮ*

ಶಿರಾಳಕೊಪ್ಪದಲ್ಲಿ ಗೋಡೆಗಳ ಮೇಲೆ ಜಾಯಿನ್ ಪಿಎಫ್ಐ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ‌ ಅದರ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *