ರಾಜ್ಯ

ಮುಖ್ಯಮಂತ್ರಿಗಳ ಜನಸ್ಪಂದನದಲ್ಲಿ 12372 ಅರ್ಜಿ ಸ್ವೀಕಾರ

*ಮುಖ್ಯಮಂತ್ರಿಗಳ ಜನಸ್ಪಂದನ – 02 ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳ ಸ್ವೀಕಾರ*

ಬೆಂಗಳೂರು ಪ್ರಜಾಕಿರಣ.ಕಾಮ್ ಫೆ. 08: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ.

*ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು*
ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ 3150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ.

ವಸತಿ ಇಲಾಖೆಗೆ 1500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ.

ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ,ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ( ಇ- ಆಡಳಿತ) ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆ – ಈ ಐದು ಇಲಾಖೆಗಳಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ.

ಬಾಕಿ ಅರ್ಜಿಗಳನ್ನು ಒಂದು ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

*ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ*

*ಎರಡನೇ ಜನಸ್ಪಂದನ ದ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮ ಗೋಷ್ಠಿಯಲ್ಲಿ ನೀಡಿದ ಖಡಕ್ ಸೂಚನೆಗಳು*

*ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ*

*ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ*

*ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ*

*ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ*

*ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ*

*ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. DC, CEO ಗಳ ಮೇಲೆ ಈ ಜವಾಬ್ದಾರಿ ಹೆಚ್ಚು ಎಂದು ಸಿಎಂ ಸೂಚಿಸಿದರು*

*ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ*

*ಒಂದು ತಿಂಗಳೊಳಗೆ ಹೆಚ್ಚು ಅರ್ಜಿ , ಅಹವಾಲು ಪರಿಗರಿಸಿ ಎಂದು DC, CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಿದ ಸಿಎಂ*

*ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ*

*ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರ ಘೋಷೊಸಿದ ಸಿಎಂ*

1. ರಾಮನಗರ ಜಿಲ್ಲೆಯ ವಿಜಯಕುಮಾರ್‌ ಬಿನ್‌ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು.

2. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್‌ ಬೋನ್‌ ಮ್ಯಾರೋ ಕಸಿಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿದರು.

3. ತುಮಕೂರು ಜಿಲ್ಲೆಯ ೮ ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ ೫೦ ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *