ಬೆಂಗಳೂರು prajakiran. com ಜನವರಿ 20: ಅನಾರೋಗ್ಯಕ್ಕೆ ಒಳಗಾಗಿ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ.
ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ ೧೪ ರಂದು ಆಸ್ಪತ್ರೆಗೆ ದಾಖಲಾಗಿದ್ದರು.
ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಚಿಕಿತ್ಸೆ ಸಂದರ್ಭದಲ್ಲಿ ಗೊತ್ತಾಗಿದೆ. ಅವರಿಗೆ ನಿರಂತರ ಚಿಕಿತ್ಸೆ ಹಾಗೂ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ.
ಕಣವಿ ಅವರು ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರು. ಹಾಗೂ ರಾಜ್ಯದ ಬೌದ್ಧಿಕ ಸಂಪತ್ತು. ಅವರು ಚೇತರಿಸಿಕೊಂಡು ಆರೋಗ್ಯ ಪೂರ್ಣ ಜೀವನ ನಡೆಸಬೇಕು ಎಂಬುದು ನಮ್ಮ ಬಯಕೆ.
ಹೀಗಾಗಿ ಕಣವಿ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.