ಬೆಂಗಳೂರು prajakiran.com : ರಾಜ್ಯದಲ್ಲಿ ಕೊರೋನಾ ಮೂರನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, ಮಂಗಳವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಂಜೆ 6 ಗಂಟೆಗೆ ಸಿಎಂ ನಿವಾಸ ಕಾವೇರಿಯಲ್ಲಿ ಸಭೆ ನಡೆಸಲಿದ್ದು, ಸಚಿವರು, ಆರೋಗ್ಯ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಲಿದ್ದಾರೆ.
ಇಂದಿನ ಸಭೆಯಲ್ಲಿ ಲಾಕ್ಡೌನ್ ಪರಿಸ್ಥಿತಿ ಅವಲೋಕಿಸಲಿದ್ದು, ಮುಂದಿನ ದಿನಗಳಲ್ಲಿ ಮತ್ತೊಂದು ಪರಿಹಾರ ಪ್ಯಾಕೇಜ್ ಘೋಷಿಸುವ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.