ಅಂತಾರಾಷ್ಟ್ರೀಯ

ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ ಮುಖ್ಯಮಂತ್ರಿ

ಮಂಗಳೂರುprajakiran.com ,ಜು‌.28 :- ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜು.28ರ ಗುರುವಾರ ಸಂಜೆ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಇಂತಹ ಕೃತ್ಯಗಳು ನಡೆಯುತ್ತಿವೆ. ಇದರ ಜಾಡು ಬೆನ್ನಟ್ಟಿರುವ ಪೊಲೀಸರ ಪ್ರಾಥಮಿಕ ತನಿಖಾ ವರದಿ ಬಂದ ಬಳಿಕ ಎನ್ ಐ ಎ ತನಿಖೆ ನಡೆಸಲು ಚಿಂತನೆ ನಡೆಸಲಾಗುವುದು ಎಂದು ಹೇಳಿದರು.

ಅಲ್ಲದೆ, ರಾಜ್ಯಕ್ಕೆ ವಿಶೇಷವಾಗಿ ಮಂಗಳೂರು ಭಾಗದಲ್ಲಿ ಎನ್ ಐ ಎ ಸ್ಥಾಪಿಸಲು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಲಾಗುತ್ತದೆ ಎಂದರು.

ಎಡಿಜಿಪಿ ನೇತೃತ್ವದ ತಂಡ ಕಾರ್ಯನಿರ್ವಹಿಸುವ ಮೂಲಕ ಶೀಘ್ರವಾಗಿ ಜಾಲ‌ಭೇದಿಸಲಾಗುವುದು. ಇದರ ಹಿಂದೆ ದೊಡ್ಡ ತಂಡವಿದೆ. ಇದೊಂದು ವ್ಯವ್ಯಸ್ಥಿತ ಪೂರ್ವ ನಿಯೋಜಿತ ಕೃತ್ಯ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್,ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ,ಮೀನುಗಾರಿಕೆ ಬಂದರು ಮತ್ತು‌ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಸಂಸದರಾದ ನಳೀನ್ ಕುಮಾರ್ ಕಟೀಲ್, ನಾಯಕರಾದ
ಸಿ.ಟಿ ರವಿ, ಶಾಸಕರಾದ ಸಂಜೀವ್ ಮಠಂದೂರು, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜನ ಪ್ರತಿನಿಧಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *