ನವದೆಹಲಿ prajakiran.com : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಬಳಿಕ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಅಭಿನಂದಿಸಿದರು.
ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೀರಾವರಿ ವಿಷಯ ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿದರು.
ಸಂಸದರಾದ ಶಿವಕುಮಾರ್ ಉದಾಸಿ ಮತ್ತು ಡಾ. ಉಮೇಶ್ ಜಾಧವ್, ಮಾಜಿ ಸಚಿವರಾದ ಆರ್. ಅಶೋಕ್, ಉಮೇಶ್ ವಿ. ಕತ್ತಿ ಜೊತೆಗಿದ್ದರು.