ರಾಜ್ಯ

ರಾಜ್ಯಪಾಲರ ಭೇಟಿ ಮಾಡಿ ರಾಜೀನಾಮೆ ನೀಡಿದ ಬಸವರಾಜ ಬೊಮ್ಮಾಯಿ

*ಪಕ್ಷಕ್ಕೆ ಆದ ಹಿನ್ನೆಡೆಯ ಜವಬ್ದಾರಿ ನಾನೇ ಹೊರುತ್ತೇನೆ*

*ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡದೇ ಜನರ ಕಲ್ಯಾಣ ಆಗಲಿ: ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌*

ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡದೇ ಜನರ ಕಲ್ಯಾಣ ಆಗಲಿ.

ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ. ವಿರೋಧ ಪಕ್ಷದಲ್ಲಿದ್ದು ಸಮರ್ಪಕವಾಗಿ ಕೆಲಸ ಮಾಡುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ರಾಜ್ಯಪಾಲರ ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ. ಜನರ ತೀರ್ಪನ್ನು ಗೌರವಯುತವಾಗಿ ಒಪ್ಪಿಕೊಂಡಿದ್ದೇವೆ. ಪಕ್ಷಕ್ಕೆ ಆದ ಹಿನ್ನೆಡೆಯ ಜವಬ್ದಾರಿ ನಾನೇ ಹೊರುತ್ತೇನೆ. ಕಳೆದ ಬಾರಿ ನನಗೆ 104 ಸೀಟು ಬಂದಿತ್ತು.

ಈ ಬಾರಿ ಪರ್ಸೆಂಟೇಜ್ ಜಾಸ್ತಿ ಬಂದರು, ಕಡಿಮೆ ಸೀಟು ಬಂದಿವೆ.ಏನೇ ಆಗಲಿ ಸೋಲು ಸೋಲು. ನಾವು ಇದರ ಬಗ್ಗೆ ಆತ್ಮವಲೋಕನ ಮಾಡಿ, ಎಲ್ಲಿ ತಪ್ಪು ಆಗಿದೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದರು.

ನಮ್ಮದು ಒಂದು ರಾಷ್ಟ್ರೀಯ ಪಕ್ಷ. ನಾವು ಕೇವಲ ಚುನಾವಣಗೆ ಮಾತ್ರ ಕೆಲಸ ಮಾಡಲ್ಲ. ರಾಷ್ಟ್ರದ ನಿರ್ಮಾಣಕ್ಕೆ ಕೆಲಸ ಮಾಡುತ್ತೇವೆ.

ಇನ್ನೇನು ಕೇವಲ 8 ರಿಂದ 10 ತಿಂಗಳಲ್ಲಿ ಲೋಕಸಭೆ ಚುನಾವಣೆ ಬರುತ್ತಿದೆ. ಆ ಚುನಾವಣೆಗೆ ಪಕ್ಷ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ. ಈ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದರು.

ನಾವು ಹಿಂದೆ ಎಷ್ಟೋ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ನೋಡಿದ್ದೇವೆ. ಸೋಲಿಗೆ ಹಲವಾರು ರೀತಿಯ ಕಾರಣಗಳು ಇವೆ.

ಅವುಗಳನ್ನು ಎಲ್ಲವನ್ನೂ ಕುಳಿತು ಚರ್ಚೆ ಮಾಡುತ್ತೇವೆ. ಏನು ವ್ಯತ್ಯಾಸ ಆಗಿದೆ, ಎಲ್ಲಿ ಏನಾಗಿದೆ ಎಂದು ಚರ್ಚಿಸಿ, ಆಗಿದ್ದ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದರು.

*ಸುದೀಪ್ ರಾಜಕಾರಣಿ ಅಲ್ಲ*

ಸೋಲಿಗೆ ಅವರನ್ನು ಹೊಣೆ ಅನ್ನುವುದು ಸರಿಯಲ್ಲ‌. ನಾನು ಈಗಾಗಲೇ ಹೇಳಿದ್ದೇನೆ. ಈ ಸೋಲಿಗೆ ನಾನೇ ಹೊಣೆ ಹೊರುತ್ತೇನೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *