ರಾಜ್ಯ

ರಾಜ್ಯದಲ್ಲಿ ಲಾಕ್ ಡೌನ್, ಕರ್ಫ್ಯೂ ಜಾರಿ ಮಾಡಲ್ಲ

ಬೆಂಗಳೂರು prajakiran.com : ದೇಶದಲ್ಲಿ ಕರೋನಾ ಹೆಚ್ಚಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಬೆಂಗಳೂರು, ಕಲಬುರಗಿ ಮತ್ತು ಬೀದರ್ ಬಗ್ಗೆ ಹೆಚ್ಚು ಗಮನಹರಿಸುವಂತೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕೆಲವು ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದೇಶದ ಕರೋನಾ ಪರಿಸ್ಥಿತಿ ಕುರಿತು ವಿಡಿಯೋ ಸಂವಾದ ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು‌.

ಸದ್ಯಕ್ಕೆ ರಾಜ್ಯದಲ್ಲಿ, ಲಾಕ್ ಡೌನ್ ಮತ್ತು ಕರ್ಫ್ಯೂ ಜಾರಿ ಮಾಡಲ್ಲ, ಹೀಗಾಗಿ ಜನರು ಸೂಕ್ತ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದರು.

‘ಮಹಾರಾಷ್ಟ್ರದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾ ಗಡಿಯನ್ನು ಹೊಂದಿರುವ ಕಲಬುರಗಿ, ಬೀದರ್‌ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ, ಈ ಮೂರು ಜಿಲ್ಲೆಗಳತ್ತ ಹೆಚ್ಚು ಗಮನ ಹರಿಸಲಾಗುವುದು.

ರಾಜ್ಯದಲ್ಲಿ ಪ್ರಕರಣಗಳು ನಿಯಂತ್ರಣದಲ್ಲಿರುವುದರಿಂದ ಭಯಪಡುವ ಅಗತ್ಯವಿಲ್ಲ. ಯಾವುದೇ ಕರ್ಫ್ಯೂ ಅಥವಾ ರಾತ್ರಿ ಕರ್ಫ್ಯೂ ಜಾರಿಯನ್ನು ತಳ್ಳಿಹಾಕಿದರು.

ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮನವಿ ಮಾಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *