ರಾಜ್ಯ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಉಪ್ಪಿನ ಬೆಟಗೇರಿ ಕುಮಾರ ವಿರೂಪಾಕ್ಷ ಸ್ವಾಮೀಜಿ ಸೇರಿ ಹಲವರ ಸ್ವಾಗತ

ಧಾರವಾಡ prajakiran.com : ರಾಜ್ಯದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರವನ್ನು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯ ಮೂರು ಸಾವಿರ ವಿರಕ್ತ ಮಠದ ಮನಿಪ್ರ ಕುಮಾರ ವಿರುಪಾಕ್ಷ ಸ್ವಾಮಿಜಿ ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ಲಿಂಗಾಯತ ಸಮುದಾಯದ ಧೀಮಂತ ನಾಯಕ ಹಾಗೂ ನಾಡಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಈ ಐತಿಹಾಸಿಕ ನಿರ್ಧಾರಕ್ಕೆ ಶ್ರೀಗಳು ಅಭಿನಂದಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡ ನಾಡಿನ ಅಪರೂಪದ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ನಾಡಿನ ವೀರಶೈವ ಲಿಂಗಾಯತರ ಎರಡು ದಶಕಗಳ ಕನಸನ್ನು ನನಸು ಮಾಡಿದ್ದಾರೆ.

ಅಲ್ಲದೇ ಸರ್ವ ಸಮಾಜಗಳ ಬಗ್ಗೆ ಗೌರವಾದರಗಳನ್ನು ಹೊಂದಿ ಅವುಗಳ ಶ್ರೇಯೊಭಿವೃದ್ದಿಗೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ಒಂದು ಕೋಟಿ ಇಪ್ಪತ್ತು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ ವೀರಶೈವ ಲಿಂಗಾಯತರಲ್ಲಿ ಲಕ್ಷಾಂತರ ಬಡ ಕುಟುಂಬಗಳಿದ್ದು, ನಿಗಮ ಸ್ಥಾಪನೆಯಿಂದ ಅವರೆಲ್ಲರಿಗೆ ಸಹಾಯ ದೊರೆಯಲಿರುವುದು ತುಂಬಾ ಸಂತೋಷದ ವಿಷಯ.

ಈ ಮೂಲಕ ಎಲ್ಲ ಸಮುದಾಯಗಳ ಅಭಿವೃದ್ದಿಯ ಕನಸುಗಾರ, ಲಿಂಗಾಯತ ಸಮುದಾಯದ ಧೀಮಂತ ನಾಯಕರು ಹಾಗೂ ನಾಡಿನ ನೆಚ್ಚಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಲಿಂಗಾಯತ ಸಮಾಜದ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು
ಉಪ್ಪಿನಬೆಟಗೇರಿಯ
ಮೂರು ಸಾವಿರ ವಿರಕ್ತಮಠ
ಮ.ನಿ.ಪ್ರ ಕುಮಾರ ವಿರೂಪಾಕ್ಷ ಸ್ವಾಮಿಜಿ ತಿಳಿಸಿದ್ದಾರೆ.

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಲು ಆದೇಶ ಮಾಡಿರುವ ಮುಖ್ಯಮಂತ್ರಿಗಳ ತೀರ್ಮಾನವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಧಾರವಾಡ ಜಿಲ್ಲಾ ಘಟಕ ಸ್ವಾಗತಿಸಿದೆ.

ರಾಜ್ಯದಲ್ಲಿನ ವೀರಶೈವ- ಲಿಂಗಾಯತರು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಸಮಾಜದ ಜನರ ಅಭ್ಯುದಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಮಹಾಸಭಾ ಸರಕಾರವನ್ನು ಒತ್ತಾಯಿಸುತ್ತ ಬಂದಿತ್ತು.
ಮಹಾಸಭಾದ ಆಗ್ರಹದಂತೆ ಇದೀಗ ಮುಖ್ಯಮಂತ್ರಿ ಬಿ.ಎಸ್
ಯಡಿಯೂರಪ್ಪ ಅವರು ನಿಗಮ ಸ್ಥಾಪಿಸಲು ಆದೇಶ ಸಂತಸ ತಂದಿದೆ.

ಇಂತಹ ಐತಿಹಾಸಿಕ ತೀರ್ಮಾನದಿಂದ ಸಮಾಜದ ಏಳಗ್ಗೆಗೆ ಸಹಾಯವಾಗಲಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದನ್ನು ಸ್ವಾಗತಿಸುತ್ತೇವೆ.
ಈ ದಿಸೆಯಲ್ಲಿ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು 500 ಕೋಟಿ ಹಣ ಮೀಸಲಿಡಬೇಕು.

ಜೊತೆಗೆ ವೀರಶೈವ-ಲಿಂಗಾಯತ ಸಮಾಜವನ್ನು ಓಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ ಮತ್ತು ಪದಾಧಿಕಾರಿಗಳು ಮುಖ್ಯಮತ್ರಿಗಳಲ್ಲಿ ಮನವಿ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *