ಬೆಂಗಳೂರು prajakiran.com : ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ವೀಡಿಯೋ ಸಂವಾದ ನಡೆಸಿದರು.
ರಾಜ್ಯದ ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕ, ಕರಾವಳಿ ಹಾಗು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
, ಯಾವುದೇ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಲದೆ, ರಾಜ್ಯದ ಕೆಲವಡೆ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮವಾಗಿ ಅಪಾಯದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಂಡಿರುವುದು ಸಮಾಧಾನ ತಂದಿದೆ ಎಂದರು.
ಇದೇ ವೇಳೆ ಕೇಂದ್ರ ಸರ್ಕಾರದ ವತಿಯಿಂದ ಕಲಬುರಗಿಯಲ್ಲಿ-2, ಯಾದಗಿರಿಯಲ್ಲಿ-2 ಮತ್ತು ರಾಯಚೂರಿನಲ್ಲಿ-1 ಎನ್ ಡಿ ಆರ್ ಎಫ್ ತಂಡಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ವಿವರಿಸಿದರು.
ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.