ರಾಜ್ಯ

ಗೃಹಲಕ್ಷ್ಮೀ ಯೋಜನೆ : ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ

 ಸಿದ್ದರಾಮಯ್ಯೆಖಡಕ್ ಎಚ್ಚರಿಕೆ

ಹಾವೇರಿ ಪ್ರಜಾಕಿರಣ .ಕಾಮ್  ಜುಲೈ 25: ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

*ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಿಗೆ ಸಚಿವರ ತಂಡದ ಭೇಟಿ*
ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ

ಜೂನ್ ತಿಂಗಳಲ್ಲಿ ಸ್ವಲ್ಪ ಕೊರತೆಯಾಗಿತ್ತು. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಮಳೆ ಹೆಚ್ಚಾಗಿದೆ ಎಂದರು.

ಹಾವೇರಿಯಲ್ಲಿ ರೈತರು ಮರಣಹೊಂದಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡುತ್ತಿದ್ದು, ಮಳೆ ಹೆಚ್ಚಾಗಿ ಬಿದ್ದಿರುವ ಕಡೆ ತಂಡಗಳನ್ನು ಮಾಡಿಕೊಂಡು ಭೇಟಿ ನೀಡಲಾಗುವುದು.

ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು. ಇಂದು ಸಚಿವ ಕೃಷ್ಣ ಬೈರೇಗೌಡ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *