ರಾಜ್ಯ

ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ

ಆರತಿ ಮಂಟಪ ನಿರ್ಮಾಣ: ಸಿಎಂ ಬಸವರಾಜ ಬೊಮ್ಮಾಯಿ*

ಬೆಂಗಳೂರು prajakiran. com ಡಿ. 9 :

ಕಾಶಿಯಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ ಮಂಪಟಗಳನ್ನು ನಿರ್ಮಿಸುವ 30 ಕೋಟಿ ರೂ. ವೆಚ್ಚದ ಯೋಜನೆಗೆ ಜನವರಿ 14, 15 ರ ಹರಜಾತ್ರೆ ಸಂದರ್ಭದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹರಿಹರದ ಪಂಚಮಸಾಲಿ ಗುರುಪೀಠದ ಆಶ್ರಯದಲ್ಲಿ ನಡೆಯಲಿರುವ ಹರಜಾತ್ರೆಯ ಲೋಗೋ, ಧ್ವನಿಸುರುಳಿ, ಟಿ ಶರ್ಟ್ ನ್ನು ಬಿಡುಗಡೆ ಮಾಡಿ ಮಾತನಾಡಿದರು.

ಹರ ಎಂದರೆ ಶಕ್ತಿ :
ಹರ ಎಂದರೆ ಆಧ್ಯಾತ್ಮಕವಾಗಿ ಶಕ್ತಿ, ಲೌಕಿಕವಾಗಿ ‘ಬಗೆಹರಿಸುವುದು’ ಎಂದರ್ಥ. ಜಗತ್ತಿನ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತಹ ಶ್ರೇಷ್ಠ ದೇವತೆ ಹರ. ಹರನನ್ನು ನಂಬುವವರು ತಮ್ಮ ಬದುಕಿನ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ.

ಪಂಚಮಸಾಲಿ ಸಮಾಜಕ್ಕೆ ದೊಡ್ಡ ಇತಿಹಾಸವಿದೆ. ಒಕ್ಕಲುತನವನ್ನು ನಂಬಿದವರು 21ನೇ ಶತಮಾನದಲ್ಲಿ ಬದಲಾವಣೆ ಆಗಬೇಕು.

ಅತಿ ಹೆಚ್ಚು ವಿದ್ಯಾವಂತರಿರುವ, ಎಲ್ಲ ರಂಗದಲ್ಲಿಯೂ ಪರಿಣಿತರಿರುವ ಸಮಾಜವಾಗಿ ಹೊರಹೊಮ್ಮಬೇಕಾಗಿರುವ ಆಧುನಿಕ ಸಮಯದ ಬೇಡಿಕೆಯಾಗಿದೆ.

*ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ :*
ಸಮಾಜವನ್ನು ಕಟ್ಟುವ ಜೊತೆಗೆ ಸಮಾಜಕ್ಕೆ ನ್ಯಾಯವನ್ನು ಒದಗಿಸುವ ವಿಚಾರದಲ್ಲಿ ಬಹಳ ಸ್ಪಷ್ಠತೆಯಿಂದ ಮುನ್ನೆಡಿದ್ದಾರೆ.

ಸಮಾಜವನ್ನು 2 ಎ ಮೀಸಲಾತಿ ನೀಡುವ ಬಗ್ಗೆ ಸೂಕ್ತ ಸಲಹೆ ಸಹಕಾರಗಳನ್ನು ನೀಡಿದ್ದಾರೆ. ಸರ್ಕಾರ ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *