ರಾಜ್ಯ

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ

ಹುಬ್ಬಳ್ಳಿ prajakiran. com ಫೆ. 28 :

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಪಾದಯಾತ್ರೆಗೆ ಬಹಳ ಮಹತ್ವ ನೀಡುವ ಅವಶ್ಯಕತೆ ಇಲ್ಲ.

ಮೇಕೆದಾಟು ಯೋಜನೆಯ ವಸ್ತುಸ್ಥಿತಿಯ ಅರಿವಿದ್ದರೂ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ. ಕಾಂಗ್ರೆಸ್ ಆಡಳಿತವಿದ್ದ ಸಂದರ್ಭದಲ್ಲಿ ಯೋಜನೆಗೆ ಡಿಪಿಆರ್ ಕೂಡ ಸಿದ್ಧಪಡಿಸಲು ಸಾಧ್ಯವಾಗಲಿಲ್ಲ. ಈ ಯೋಜನೆಗೆ ಕಾಂಗ್ರೆಸ್ ನವರ ಕೊಡುಗೆ ಏನು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದರು.

ಮೇಕೆದಾಟು ಯೋಜನೆ ಹಾಗೂ ಕಳಸಾ ಬಂಡೂರಿ ಯೋಜನೆಗಳಿಂದ ರಾಜ್ಯದ ಜನತೆಗೆ ನೀರು ದೊರೆಯುವಂತಾಗಬೇಕು.

ಈ ನಿಟ್ಟಿನಲ್ಲಿ ಸರ್ಕಾರ ಪೂರಕ ನಿರ್ಣಯಗಳನ್ನು ಕೈಗೊಳ್ಳಲಿದೆ . ಈ ವಿಷಯದಲ್ಲಿ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *