ಜಿಲ್ಲೆ

ಮತ್ತೋಮ್ಮೆ ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ : ಪಿ.ಎಚ್. ನೀರಲಕೇರಿ

* ಧಾರವಾಡದಲ್ಲಿಯೂ ನೇರಪ್ರಸಾರ ವೀಕ್ಷಣೆ

* ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿ ದ ಪ್ರತಿಜ್ಞಾ ದಿನ 

ಧಾರವಾಡ prajakiran.com : ದೇಶ ಹಾಗೂ ರಾಜ್ಯದಲ್ಲಿ ಕರೋನಾವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾಗಿರುವ ಭ್ರಷ್ಟ, ಕೋಮುವಾದಿ ಬಿಜೆಪಿ ಸರಕಾರದ ದುರಾಡಳಿತವನ್ನು ಬುಡಸಮೇತ ಕಿತ್ತೋಗೆದು ಮತ್ತೋಮ್ಮೆ ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಕಾರ್ಯಕರ್ತರು ದೃಢ ಸಂಕಲ್ಪ ಮಾಡಿದ್ದಾರೆ ಎಂದು ಕಾಂಗ್ರೆಸ್ ಮಾಧ್ಯಮ ವಕ್ತಾರ ಪಿ.ಎಚ್. ನೀರಲಕೇರಿ ತಿಳಿಸಿದರು.

ಅವರು ಧಾರವಾಡದ ಕಿಲ್ಲಾ ರಸ್ತೆಯಲ್ಲಿರುವ ವಿಶಾಲ್ ರೆಸಿಡೆನ್ಸಿಯಲ್ಲಿ ಆಯೋಜಿಸಿದ್ದ ಪ್ರತಿಜ್ಞಾ ದಿನದ ನೇರ ಪ್ರಸಾರದ ನೇತೃತ್ವವಹಿಸಿ ಮಾತನಾಡಿದರು.

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಇಂದು ಡಿಕೆ ಶಿವಕುಮಾರ್ ಅವರು ಅಧಿಕಾರ ಪದಗ್ರಹಣ ಮಾಡಿರುವುದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ. ಇದು ದೇಶಕ್ಕೆ ಒಂದು ಹೊಸ ದಿಕ್ಸೂಚಿಯಾಗುವ ಹುಮ್ಮಸ್ಸು ಮೂಡಿಸಿದೆ ಎಂದರು.



ರಾಜ್ಯದೆಲ್ಲಡೆ ಏಕಕಾಲಕ್ಕೆ 15 ಸಾವಿರ ಸ್ಥಳದಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿಜ್ಞಾ ದಿನವನ್ನಾಗಿಸಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿದ್ದಾರೆ ಎಂದರು.

ಇದರಿಂದಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೇ ತನ್ನ ಅಸ್ತಿತ್ವವನ್ನು ಪುನರ್ ಸ್ಥಾಪಿಸಲು ಹಾಗೂ ಕಾಂಗ್ರೆಸ್ ನಲ್ಲಿ ಇನ್ನೂ ಮುಂದೆ ವ್ಯಕ್ತಿ ಪೂಜೆ ಇಲ್ಲ. ಪಕ್ಷವೇ ಮುಖ್ಯ ಎಂಬ ಸಂದೇಶ ರವಾನಿಸಿದ್ದಾರೆ.

ಎಷ್ಟೇ ದೊಡ್ಡ ನಾಯಕರು ಕೂಡ ಸಾಮಾನ್ಯ ಕಾರ್ಯಕರ್ತರೆಂಬುದು  ಪ್ರಸ್ತಾಪಿಸಿರುವುದು ಸಂತಸ ತಂದಿದೆ ಎಂದು ಹೇಳಿದರು.

ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯನ್ನಾಗಿಸಲು ಶಕ್ತಿ ತುಂಬಿದರೆ, ಡಿ.ಕೆ. ಶಿವಕುಮಾರ ಅವರು ರಾಜ್ಯದ ಮುಖ್ಯಮಂತ್ರಿಗಳಾಗಲಿದ್ದಾರೆ ಎಂಬ ಹುರುಪು  ಹಾಗೂ ಆತ್ಮ ವಿಶ್ವಾಸ ಮೂಡಿಸಿದೆ ಎಂದು ಹೇಳಿದರು.



ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸತೀಶ ಜಾರಕಿಹೊಳಿ, ಸಲೀಂ ಅಹ್ಮದ್, ಈಶ್ವರ ಖಂಡ್ರೆ ಅವರು ನೇಮಕಗೊಂಡಿರುವುದು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಸಂದೇಶ ರವಾನಿಸಿದಂತಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ಐ.ಎಂ. ಜವಳಿ, ಕಾಂಗ್ರೆಸ್ ಮುಖಂಡರಾದ ಪ್ರತಾಪ ಚವ್ಹಾಣ, ಎಸ್. ಎ. ಪವಾರ, ವಿಲ್ಸನ್ ಫರ್ನಾಂಡಿಸ್, ರತ್ನಾಕರ್ ದೇವಾನಂದ, ಶ್ರೀಮತಿ ವರಲಕ್ಷ್ಮಿ, ಸುಮೀತ್ರಾ ಕೋಟಕರ್ , ಯುವ ಕಾಂಗ್ರೆಸ್ ಮುಖಂಡರಾದ ಅಕ್ಷಯ ಪಾಟೀಲ್ , ರವಿ ಗೌಳಿ, ಕಿರಣ ಉಳ್ಳಿಗೇರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಸಾಮಾನ್ಯ ಕಾರ್ಯಕರ್ತರು ಉಪಸ್ಥಿತರಿದ್ದರು.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *