ರಾಜ್ಯ

ಕುಸಮ ವಿರುದ್ದ ದೂರು ದಾಖಲಿಸಿದ ಪೊಲೀಸರ ವಿರುದ್ದ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ

ಬೆಂಗಳೂರು prajakiran.com : ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹೆಚ್ ವಿರುದ್ಧ  ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿರುವ ಪೋಲಿಸರ ನಡೆ ಖಂಡಿಸಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಎದುರು ಶುಕ್ರವಾರ ಕರ್ನಾಟಕ ಮಹಿಳಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಮಾಡದ ತಪ್ಪಿಗೆ ಕುಸುಮ ಮೇಲೆ ಪೋಲಿಸರು ಎಫ್ ಐ ಆರ್ (FIR) ಹಾಕಿರುವುದು ಖಂಡನೀಯ.

ಕೂಡಲೇ ಎಫ್ ಐ ಆರ್ ಅನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ವಕ್ತಾರೆ ಹಾಗೂ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಕೆಪಿಸಿಸಿ
ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ, ಶಾಸಕಿ ಸೌಮ್ಯ ರೆಡ್ಡಿ, ಮಾಜಿ ಸಚಿವೆ ಉಮಾಶ್ರೀ, ಸೇರಿಂತೆ ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳು ಪಾಲ್ಗೊಂಡಿದ್ದರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *