ರಾಜ್ಯ

ಕೈಗೆ ಪಟ್ಟಿಕೊಂಡು ದಿನವೀಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್

ಧಾರವಾಡ prajakiran.com : ಸಿಬಿಐ ಅಧಿಕಾರಿಗಳ ತಂಡ ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನು ವಿಚಾರಣೆ ಹಿನ್ನೆಲೆಯಲ್ಲಿ ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕೈಗೆ ಪಟ್ಟಿಕೊಂಡು ದಿನವೀಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಅಲ್ಲದೆ, ಬಿಜೆಪಿ ಸರ್ಕಾರ ಸಿಬಿಐ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಘೋಷಣೆ ಕೂಗಿದರೆ, ಕೆಲವರು ಚಪ್ಪಲಿ ಹಿಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಜಿಲ್ಲಾಧ್ಯಕ್ಷ ಅನಿಲ ಪಾಟೀಲ, ನಾಗರಾಜ ಛಬ್ಬಿ, ಕೆಸಿಸಿ ಬ್ಯಾಂಕ್ ಅಧ್ಯಕ್ಷ ಬಾಪುಗೌಡ ಪಾಟೀಲ, ಕೆಪಿಸಿಸಿ ಸದಸ್ಯ ಶಿವಶಂಕರ ಹಂಪಣ್ಣವರ ಕಾಂಗ್ರೆಸ್ ಮುಖಂಡರಾದ ವಿನೋದ ಅಸೂಟಿ, ಆನಂದ ಸಿಂಗನಾಥ್, ಬಸವರಾಜ ಜಾಧವ ಸೇರಿದಂತೆ ಇತರರು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *