ಅಂತಾರಾಷ್ಟ್ರೀಯ

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಗೆ ಟಿಕೇಟ್

ನವದೆಹಲಿ prajakiran.com : ರಾಜ್ಯದಿಂದ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಗೆ ಟಿಕೇಟ್ ನೀಡಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ.

ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧೆ ಮಾಡಲು ಕಾಂಗ್ರೆಸ್ ಟಿಕೇಟ್ ನೀಡಲಾಗಿದೆ.  

ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಲೋಕಸಭೆಯ ಸಂಸದೀಯ ನಾಯಕರಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ವಿರುದ್ದ ಸೋಲು ಅನುಭವಿಸಿದ್ದರು.



ಈಹಿನ್ನಲೆಯಲ್ಲಿ ಅವರಿಗೆ ರಾಜ್ಯಸಭೆಗೆ ಆಯ್ಕೆ ಮಾಡುವ ಮೂಲಕಅವರಿಗೆ ಮತ್ತೇ ಶಕ್ತಿ ತುಂಬಲು ಸಮ್ಮತಿ ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಸುಗಮವಾದಂತಾಗಿದೆ.

ಇನ್ನುಳಿದ ಒಂದು ಸ್ಥಾನಕ್ಕೆ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರನ್ನು ಕೂಡ ರಾಜ್ಯ ಸಭೆಗೆ ಕಳುಹಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಆ ಮೂಲಕ ವಿಧಾನಪರಿಷತ್ ನಲ್ಲಿ ಜೆಡಿಎಸ್ ನಿಂದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಪಡೆಯಲು ಮಾತುಕತೆಗಳು ನಡೆದಿವೆ. ಅದು ಫಲಪ್ರದವಾದರೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹಾದಿ ಕೂಡ ಸುಗಮವಾಗಲಿದೆ ಎನ್ನಲಾಗುತ್ತಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *