ರಾಜ್ಯ

ಸಂವಿಧಾನ ವಿರೋಧಿ ಶಕ್ತಿಗಳು ಮನುಸ್ಮೃತಿ ಜಾರಿಗೆ ಹುನ್ನಾರ : ಸಿಎಂ

*We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ*

*ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ*

*ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*

*ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ*

ಬೆಂಗಳೂರು ಸೆ 15: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿಗೆ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಅಭೂತಪೂರ್ವ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು.

We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ.
ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ.

ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಚಿವರುಗಳಾದ ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್ ಸಭಾಪತಿ ಹೊರಟ್ಟಿ,ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯರಾದ ಸುದಾಮ್ ದಾಸ್ ಸೇರಿ 10 ಕ್ಕೂ ಹೆಚ್ಚು ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

*ಭಾಷಣದ ಇತರೆ ಹೈಲೈಟ್ಸ್*

*ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು*

*ಬುದ್ದ, ಬಸವ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ*

*ಸಂವಿಧಾನ ಜಾರಿ ಆಗುವ ಸಂದರ್ಭದಲ್ಲಿ ಪಾರ್ಲಿಮೆಂಟಿನಲ್ಲಿ ನಡೆದ ಚರ್ಚೆಗಳು ನಮ್ಮ ಸಂವಿಧಾನದ ಮಹತ್ವಕ್ಕೆ ಮತ್ತು ಸಂವಿಧಾನ ವಿರೋಧಿಗಳ ಮನಸ್ಥಿತಿಗೆ ಕನ್ನಡಿ ಹಿಡಿದಂತಿವೆ*

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *