ನವದೆಹೆಲಿprajakiran.com : ಕಳೆದ 24 ಗಂಟೆಯಲ್ಲಿ 2,57,299 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು, 4,194 ಸೋಂಕಿತರು ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,57,299 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,62,89,290ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಶುಕ್ರವಾರ 3,57,630 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,30,70,365 ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 29,23,400 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ದೇಶಾದ್ಯಂತ ಶುಕ್ರವಾರ 4,194 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,95,525 ಕ್ಕೆ ಏರಿಕೆಯಾಗಿದೆ.