ರಾಜ್ಯ

ರಾಜ್ಯದಲ್ಲಿ ಒಂದು ಲಕ್ಷ ಗಡಿ ದಾಟಿದ ಕೋರನಾ : ಸೋಮವಾರದ ಸೋಂಕಿಗೆ ಬರೋಬ್ಬರಿ  75 ಸಾವು,  5324 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ75 ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 5324  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 101465 ಕ್ಕೆ ಏರಿಕೆಯಾಗಿದೆ.

 ಇಂದು ರಾಜ್ಯದಲ್ಲಿ 1847 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 37,685 ಜನ ಗುಣಮುಖರಾಗಿದ್ದು,   61,819 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 598 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಸೋಮವಾರವೂ 75 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 1953 ಕ್ಕೆ ಏರಿಕೆಯಾದಂತಾಗಿದೆ.

ಸೋಮವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ  1470 ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

ಇನ್ನೂಳಿದಂತೆ  ಬಳ್ಳಾರಿ 840, ಕಲಬುರಗಿ 631, ಮೈಸೂರು 296, ಉಡುಪಿ 225, ಧಾರವಾಡ 193, ಬೆಳಗಾವಿ 155, ಕೋಲಾರ 142, ಬೆಂಗಳೂರು ಗ್ರಾಮಾಂತರ 138, ರಾಯಚೂರು 120, ದಕ್ಷಿಣ ಕನ್ನಡ 119, ವಿಜಯಪುರ ಹಾಗೂ ದಾವಣಗೆರೆ ತಲಾ 110,  ತುಮಕೂರು 89, ಶಿವಮೊಗ್ಗ 76, ಹಾಸನ 66, ಯಾದಗಿರಿ 64, ಗದಗ 63, ರಾಮನಗರ 62, ಮಂಡ್ಯ 56, ಚಿತ್ರದುರ್ಗ 51, ಬೀದರ 42, ಚಿಕ್ಕಬಳ್ಳಾಪುರ 40, ಉತ್ತರ ಕನ್ನಡ 32, ಕೊಪ್ಪಳ 28, ಬಾಗಲಕೋಟೆ ಹಾಗೂ ಹಾವೇರಿ ತಲಾ 27, ಚಿಕ್ಕಮಗಳೂರು 26, ಚಾಮರಾಜನಗರ 16, ಕೊಡಗು 10 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಸೋಮವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 26  ಜನ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ 9, ಧಾರವಾಡ 8, ಬೆಳಗಾವಿ 6, ಬಳ್ಳಾರಿ, ಮೈಸೂರು ತಲಾ 3, ಕಲಬುರಗಿ, ಕೋಲಾರ, ರಾಯಚೂರು, ವಿಜಯಪುರ ಹಾಗೂ ಬಾಗಲಕೋಟೆ ತಲಾ 2, ಚಿಕ್ಕಮಗಳೂರು, ಹಾವೇರಿ, ಕೊಪ್ಪಳ, ಉತ್ತರಕನ್ನಡ, ಬೀದರ, ಗದಗ, ಹಾಸನ, ಶಿವಮೊಗ್ಗ, ದಾವಣಗೆರೆ ಹಾಗೂ ಬೆಂಗಳೂರು ಗ್ರಾಮಾಂತರ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *