ರಾಜ್ಯ

ರಾಜ್ಯದಲ್ಲಿ ಗುರುವಾರ ಸೋಂಕಿಗೆ ಬರೋಬ್ಬರಿ 93 ಸಾವು, 6805 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ93 ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 6805 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,58,254 ಕ್ಕೆ ಏರಿಕೆಯಾಗಿದೆ.

 ಇಂದು ರಾಜ್ಯದಲ್ಲಿ 5602 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  80281 ಜನ ಗುಣಮುಖರಾಗಿದ್ದು,  75068 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 671 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಗುರುವಾರವೂ 93 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 2897 ಕ್ಕೆ ಏರಿಕೆಯಾದಂತಾಗಿದೆ.

ಗುರುವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ 2544 ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

ಇನ್ನೂಳಿದಂತೆ  ಬಳ್ಳಾರಿ 431, ಮೈಸೂರು 361, ಶಿವಮೊಗ್ಗ 292, ಬೆಳಗಾವಿ 229, ಉಡುಪಿ 217, ಧಾರವಾಡ 212, ದಾವಣಗೆರೆ 197, ಕಲಬುರಗಿ 196, ರಾಯಚೂರು 181, ದಕ್ಷಿಣ ಕನ್ನಡ 173, ಬಾಗಲಕೋಟೆ 168, ತುಮಕೂರು 160, ಹಾಸನ 158, ಮಂಡ್ಯ 134, ಕೊಪ್ಪಳ 132, ಗದಗ 124, ಚಿಕ್ಕಬಳ್ಳಾಪುರ 117, ಕೋಲಾರ 107, ಬೀದರ 98, ಚಾಮರಾಜನಗರ 95, ಉತ್ತರಕನ್ನಡ 77, ಹಾವೇರಿ 64, ಚಿಕ್ಕಮಗಳೂರು 59, ವಿಜಯಪುರ ಹಾಗೂ ಚಿತ್ರದುರ್ಗ ತಲಾ 58,  ಕೊಡಗು 51, ರಾಮನಗರ 41, ಯಾದಗಿರಿ 37, ಬೆಂಗಳೂರು ಗ್ರಾಮಾಂತರ 34, ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಗುರುವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 15 ಜನ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ 11, ಧಾರವಾಡ ಹಾಗೂ ದಾವಣಗೆರೆ ತಲಾ 8, ಉಡುಪಿ 6, ಕಲಬುರಗಿ ಹಾಗೂ ತುಮಕೂರು ತಲಾ 5, ಕೋಲಾರ, ಹಾಸನ, ಮೈಸೂರು ಹಾಗೂ ಬಳ್ಳಾರಿ ತಲಾ 4, ಶಿವಮೊಗ್ಗ ಹಾಗೂ ಬೀದರ ತಲಾ 3, ರಾಯಚೂರು ಹಾಗೂ ಗದಗ ತಲಾ 2, ವಿಜಯಪುರ, ಯಾದಗಿರಿ, ಹಾವೇರಿ, ಉತ್ತರಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಬಾಗಲಕೋಟೆ ಹಾಗೂ ಬೆಳಗಾವಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *