ಅಂತಾರಾಷ್ಟ್ರೀಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ, ರಾಹುಲ್ ಗಾಂಧಿ, ಕ್ರೇಜಿವಾಲ್ ಪತ್ನಿಗೂ ಕರೋನಾ

ನವದೆಹಲಿ prajakiran.com : ಕೊರೋನಾ ಸೋಂಕು ಧೃಡ ಪಟ್ಟು ಆಸ್ಪತ್ರೆಗೆ ದಾಖಲಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಉತ್ತಮ ಆರೈಕೆ ಮಾಡಲಾಗುತ್ತಿದೆ.

ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸೋಣವೆಂದು ಟ್ಟಿಟ್ಟ ಮಾಡುವ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್ ಪತ್ನಿಗೆ ಕೊರೋನಾ

ದೆಹಲಿಯಲ್ಲಿ ಕೊರೋನಾ ಸೋಂಕು ಹೆಚ್ಚಾದ ಹಿನ್ನೆಲೆ ಲಾಕ್‌ಡೌನ್ ಮಾಡಲಾಗಿದ್ದು, ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸುನೀತಾ ಅವರಿಗೆ ಕೊರೋನಾ ಲಕ್ಷಣಗಳು ಕಾಣಿಸಿದ್ದರಿಂದ ಕೊರೋನಾ ಪರೀಕ್ಷೆ ಮಾಡಿಸಿದ್ದಾರೆ.

ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು, ಪ್ರಾಥಮಿಕ ಸಂಪರ್ಕಿತರಾದ ಅರವಿಂದ್ ಕೇಜ್ರೀವಾಲ್ ಅವರು ಸ್ವಯಂ ಕ್ವಾರೆಂಟೀನ್ ಆಗಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೂ ತಗುಲಿದ ಕೊರೋನಾ

ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಎಲ್ಲರ ಬೆನ್ನುಹತ್ತಿದೆ. ಇದೀಗ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಇತ್ತೀಚಿಗೆ ನನ್ನ ಸಂರ್ಪಕಕ್ಕೆ ಬಂದ ಎಲ್ಲರೂ ಕ್ವಾರೆಂಟೀನ್ ಆಗಿ, ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ.

ಕೊರೋನಾದಿಂದ ದೂರ ಇರಲು ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಿ. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡಿ ಎಂದು ಟ್ವಿಟ್ ಮಾಡುವ ಮೂಲಕ ಹೇಳಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *