ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೋಮವಾರ 8 ಸಾವು, 193 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ 193  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.

ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3383 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಸೋಮವಾರವು  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ.

ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  103 ಕ್ಕೆ ಏರಿದಂತಾಗಿದೆ.  

ಸೋಮವಾರ ಜಿಲ್ಲೆಯಲ್ಲಿ  55 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 1277 ಜನರು ಬಿಡುಗಡೆಗೊಂಡತಾಗಿದೆ. ಇನ್ನೂ 2003 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ  ಎಂದು ವಿವರಿಸಿದೆ.

ಜಿಲ್ಲೆಯಲ್ಲಿ ಸೋಮವಾರ ಎಂಟು ಜನರು ಚಿಕಿತ್ಸೆ ಫಲಿಸದೆ ಜಿಲ್ಲೆಯ ವಿವಿಧ ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೇಟಿನ್ ವಿವರಿಸಿದೆ. 

ಇದಲ್ಲದೆ, ಇನ್ನೂ  36 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *