ಜಿಲ್ಲೆಯಲ್ಲಿ ಇಂದು 150 ಜನರ ಬಿಡುಗಡೆ
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಇಳಿಕೆಯತ್ತ ಸಾಗಿದೆ.
ಸೋಂಕಿತರ ಸಂಖ್ಯೆ ಶುಕ್ರವಾರ ಮತ್ತೆ ಸ್ವಲ್ಪ ಕಡಿಮೆಯಾಗಿದೆ.
ಇಂದು ಕೇವಲ 65 ಜನರಿಗೆ ಮಾತ್ರ ಕರೋನಾ ಪಾಸಿಟಿವ್ ಬಂದಿದೆ.
ದುರಂತದ ಸಂಗತಿಯೆಂದರೆ ಇಂದು ಬರೋಬ್ಬರಿ 9 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 6,
ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ 2 ಹಾಗೂ ನವಲಗುಂದ ತಾಲೂಕಿನ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಆತಂಕದ ವಿಚಾರವೆಂದರೆ 440 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1115 ಕ್ಕೆ ಎರಿಕೆ ಆಗಿದೆ.
ಸಮಾಧಾನದ ಸಂಗತಿಯೆಂದರೆ ಸೋಂಕಿತರು 150 ಜನರು ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.