ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 60,753 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 60,753 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,23,546ಕ್ಕೆ ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 97,743 ಕೊರೋನಾ ಸೋಂಕಿತರು ಚೇತರಿಸಿಕೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ 2,86,78,390 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 7,60,019 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ನಿನ್ನೆ ಒಂದೇ ದಿನ ದೇಶಾದ್ಯಂತ 1,647 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,85,137 ಕ್ಕೆ ಏರಿಕೆಯಾಗಿದೆ.