ಅಂತಾರಾಷ್ಟ್ರೀಯ

ದೇಶದಲ್ಲಿ ಈವರೆಗೆ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,96,730……!

ದೇಶದಲ್ಲಿ ನಿನ್ನೆ 46,148 ಹೊಸ ಕೊರೋನಾ ಸೋಂಕಿತರು ಪತ್ತೆ

ನವದೆಹಲಿ prajakiran.com : ದೇಶದಲ್ಲಿ ಲಾಕ್‌ಡೌನ್ ಮಾಡಿದ ಪರಿಣಾಮ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 46,148 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 46,148 ಹೊಸ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,02,79,331 ರಷ್ಟಾಗಿದೆ.

ನಿನ್ನೆ 58,578 ಕೊರೋನಾ ಸೋಂಕಿತರು ಚೇತರಿಸಿಕೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ 2,93,09,607ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 5,72,994 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ದೇಶಾದ್ಯಂತ ನಿನ್ನೆ 979 ಸೋಂಕಿತರು ಅಸುನೀಗಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,96,730ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *