ಅಂತಾರಾಷ್ಟ್ರೀಯ

ಮತ್ತೆ ಹೆಚ್ಚಾಯ್ತು ಕೊರೋನಾ ಸೋಂಕಿತರ, ಸಾವಿನ ಸಂಖ್ಯೆ

ನವದೆಹಲಿ prajakiran.com : ದೇಶದಲ್ಲಿ ಇಂದು ಮತ್ತೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 43,733 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 930 ಮಂದಿ ಸೋಂಕಿ ಬಲಿಯಾಗಿದ್ದಾರೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 43,733 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,06,63,665 ಕ್ಕೆ ಏರಿಕೆಯಾಗಿದೆ.

ನಿನ್ನೆ ದೇಶದಲ್ಲಿ 47,240 ಕೊರೋನಾ ಸೋಂಕಿತರು ಚೇತರಿಸಿಕೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ 2,97,99,534 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,59,920 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ನಿನ್ನೆ ಒಂದೇ ದಿನ ದೇಶಾದ್ಯಂತ 930 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದು ಮತ್ತೆ ಜನರಲ್ಲಿ ಆತಂಕ ಮೂಡಿಸಿದೆ. ಒಟ್ಟು ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,04,211 ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *