ರಾಜ್ಯ

ರಾಜ್ಯದಲ್ಲಿ 200ರ ಗಡಿ ಸಮೀಪಿಸಿದ ಕರೋನಾ ಸೋಂಕಿತರ ಸಾವು…!

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ  ಸಾವಿನ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಲೇ ಸಾಗಿದೆ.

ಕಳೆದ ಒಂದು ವಾರದಿಂದ ಪ್ರತಿನಿತ್ಯ 5ರಿಂದ 10ರವರೆಗೆ ರೋಗಿಗಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪುತ್ತಿದ್ದಾರೆ.

ಅದರಲ್ಲೂ ಉಸಿರಾಟದ ತೊಂದರೆ, ವಿವಿಧ ರೋಗ ಲಕ್ಷಣಗಳು ಇರುವ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪುತ್ತಿರುವುದು ಕಂಡು ಬಂದಿದೆ.



ನಿನ್ನೇ ಜೂನ್ 27ರಂದು ಶನಿವಾರ ಬರೋಬ್ಬರಿ 11 ಜನ ಸೋಂಕಿತರು ಸಾವನ್ನಪ್ಪುವ ಮೂಲಕ ಸಾವಿನ ಸಂಖ್ಯೆ 191 ಕ್ಕೆ ಬಂದು ನಿಂತಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುವ ಜೊತೆಗೆ ಸಾವಿನ ಸಂಖ್ಯೆ ಹೆಚ್ಚಳವಾಗಿರುವುದು ಸರಕಾರ ಹಾಗೂ ಬೆಂಗಳೂರಿನ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.




ಇದಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 197 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  

ಐಸಿಯುಗೆ ದಾಖಲಾಗುವವರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಹೀಗಾಗಿ ಸಾವಿನ ಸಂಖ್ಯೆ ರಾಜ್ಯದಲ್ಲಿ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ.   



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *