ಅಂತಾರಾಷ್ಟ್ರೀಯ

ದೇಶದಲ್ಲಿ ಒಂದೇ ದಿನ ಕೊರೋನಾ ಅಟ್ಟಹಾಸಕ್ಕೆ ಮೃತಪಟ್ಟವರ ಸಂಖ್ಯೆ 2,812 ಕ್ಕೆ ಏರಿಕೆ

ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕು ತನ್ನ ಅಟ್ಟಹಾಸ ಮೆರೆಯುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 3,52,991 ಹೊಸ ಪ್ರಕರಣಗಳು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ವರದಿ ಪ್ರಕಾರ, ನಿನ್ನೆ ದೇಶದಲ್ಲಿ 3,52,991 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ.

ಇವರ ಪೈಕಿ ದೇಶದಲ್ಲಿ 28,13,658 ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರದಂದು 2,812 ಮಂದಿ ಕೊರೋನಾಗೆ ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,95,123ಕ್ಕೆ ಏರಿಕೆಯಾಗಿದೆ.

ಭಾನುವಾರ ದೇಶದಲ್ಲಿ 2,19,272 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,43,04,382ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *