ನವದೆಹಲಿ prajakiran. com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಮಟ್ಟಿದೆ ಕಡಿಮೆಯಾಗಿದೆ ಎನ್ನಬಹುದು.
ಕಳೆದ 24 ಗಂಟೆಯಲ್ಲಿ 3,92,488 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,92,488 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
ಒಟ್ಟಾರೆ ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದೆ.
ಶನಿವಾರ ಒಂದೇ ದಿನ ದೇಶದಲ್ಲಿ 3,07,865 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,59,92,271ಕ್ಕೆ ಏರಿಕೆಯಾಗಿದೆ.
ಆನಿವಾರ ದೇಶಾದ್ಯಂತ 3689 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,15,542 ಕ್ಕೆ ಏರಿಕೆಯಾಗಿದೆ.