ನವದೆಹಲಿ prajakiran.com : ದೇಶದಲ್ಲಿ ಸೋಮವಾರದಂದು 3,57,229 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಹೊಸ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖ ಕಂಡಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 2,02,82,833ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ವರದಿ ಪ್ರಕಾರ, ಸೋಮವಾರ ದೇಶದಲ್ಲಿ 3,57,229 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2,02,82,833ಕ್ಕೆ ಏರಿಕೆಯಾಗಿದೆ.
ಇದರಲ್ಲಿ 34,47,133 ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ದೇಶದಲ್ಲಿ 3,20,289 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,66,13,292ಕ್ಕೆ ಏರಿಕೆಯಾಗಿದೆ.
ಭಾನುವಾರ ಒಂದೇ ದಿನ ದೇಶದಲ್ಲಿ 3,449 ಮಂದಿ ಕೊರೋನಾಗೆ ಬಲಿಯಾಗಿದ್ದು, ಒಟ್ಟು 2,22,408 ಮಂದಿ ಮೃತಪಟ್ಟಿದ್ದಾರೆ.