ನವದೆಹೆಲಿ prajakiran.com : ದೇಶದಲ್ಲಿ ಸೋಂಕಿತರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 4,14,188 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 18,732 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,14,91,598ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 3,31,507 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,76,12,351ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 36,45,164 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 3,915 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,34,083 ಕ್ಕೆ ಏರಿಕೆಯಾಗಿದೆ.